65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ದೇವರಾಜ್ ಮತ್ತು ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗೌರವ

2017ನೇ ಸಾಲಿನ ಪ್ರತಿಷ್ಟಿತ 65ನೇ ರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದೆ. ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ‘ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ’ ಪ್ರಶಸ್ತಿ ಲಭಿಸಿದೆ.ಈ ಚಿತ್ರದಲ್ಲಿ ಖ್ಯಾತ ಹಿರಿಯ ಕಲಾವಿದರಾದ ದೇವರಾಜ್ ಮತ್ತು ತಾರಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಒಂದರ ಹಿಂದೊಂದು ಸಿನಿಮಾ ಸೆಟ್ಟೇರುತ್ತಿರುವ ಈ ಸಮಯದಲ್ಲಿ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ರಾಷ್ರ್ಟ ಪ್ರಶಸ್ತಿ ಬಂಧಿರುವುದು ಕನ್ನಡ ಚಿತ್ರರಂಗಕ್ಕೆ ಖುಷಿ ತಂದು ಕೊಟ್ಟಿದೆ. ಈ ಚಿತ್ರವು ಸಾಮಾಜಿಕ ಕಳಕಳಿ ಹೊಂದಿರುವ ಚಿತ್ರವಾಗಿದ್ದು ಈ ಚಿತ್ರವನ್ನು ಎನ್.ಆರ್. ನಂಜುಂಡೇಗೌಡ ನಿರ್ದೇಶಿಸಿದ್ದಾರೆ.

ನಟ ವಿನೋದ್ ಖನ್ನಾರಿಗೆ ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಗೌರವಕ್ಕೆ ಪಾತ್ರರಾಗಿದ್ದಾರೆ. 2017ರ ಅತ್ಯುತ್ತಮ ನಟ ಪ್ರಶಸ್ತಿಗೆ ‘ರುಸ್ತುಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅಕ್ಷಯ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟಿಯಾಗಿ ‘ಮಾಮ್’ ಚಿತ್ರದಲ್ಲಿನ ಅಭಿನಯಕ್ಕೆ ದಿವಂಗತ ತಾರೆ ಶ್ರೀದೇವಿ ಭಾಜನರಾಗಿದ್ದಾರೆ.

ಅತ್ಯುತ್ತಮ ಜನಪ್ರಿಯ ಚಿತ್ರ ಪ್ರಶಸ್ತಿ ‘ಬಾಹುಬಲಿ 2’ಗೆ ಒಲಿದಿದೆ. ಅತ್ಯುತ್ತಮ ಹಿನ್ನೆಲೆ ಗಾಯಕರಾಗಿ ಯೇಸುದಾಸ್ ಹಾಗೂ ಗಾಯಕಿಯಾಗಿ ಸಾಷಾ ತೃಪತಿ ಆಯ್ಕೆಯಾಗಿದ್ದಾರೆ. ಮೇ. ೦3 ರಂದು 65 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಬ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

SHARE