ರಾಜ್ಯ ಸರ್ಕಾರದಿಂದ ‘ಉದ್ಯೋಗಿನಿ ಯೋಜನೆ’ ಅಡಿಯಲ್ಲಿ 3 ಲಕ್ಷ ಸಾಲ, 90 ಸಾವಿರ ಸಬ್ಸಿಡಿ ಪಡೆಯಿರಿ

  ರಾಜ್ಯ ಸರ್ಕಾರ ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, ಮೂರು ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸಲಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕರ್ನಾಟಕ ಸರಕಾರದ ಪ್ರಮುಖ ನವೀನ ಯೋಜನೆಗಳಲ್ಲಿ ಇದು ಕೂಡ ಒಂದು. ಮಹಿಳೆಯರಿಗಾಗಿ ಪ್ರತ್ಯೇಕವಾದ ಸ್ಕೀಮ್ ಮತ್ತು ವಿವಿಧ ಸಾಲ ಸೌಲಭ್ಯ ಯೋಜನೆ

  ಮಹಿಳಾ ಸಬಲೀಕರಣದ ಧ್ಯೇಯ ಉದ್ಯೋಗಿನಿ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಮೂಲಕ ಸಾಲಗಳನ್ನು ಒದಗಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಸಹಕರಿಸುತ್ತದೆ. ಇದು ವ್ಯಾಪಾರ ಚಟುವಟಿಕೆಗಳನ್ನು/ಸೂಕ್ಷ್ಮ ಉದ್ಯಮಗಳನ್ನು ಕೈಗೊಳ್ಳಲು ಸಬ್ಸಿಡಿಯನ್ನೂ ಸಹ ಒದಗಿಸುತ್ತದೆ. ‘ಉದ್ಯೋಗಿನಿ’ ಯೋಜನೆ ವಿಶೇಷವಾಗಿ ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗದ ಮೂಲಕ ಸ್ವಯಂ ಅವಲಂಬನೆ ಪಡೆಯುವುದರಲ್ಲಿ ನೆರವಾಗುತ್ತದೆ.

  ಸಾಲ ನೀಡುವ ಬ್ಯಾಂಕುಗಳು: ವಾಣಿಜ್ಯ ಬ್ಯಾಂಕುಗಳು, ಜಿಲ್ಲೆಯ ಸಹಕಾರಿ ಬ್ಯಾಂಕುಗಳು ಮತ್ತು ಆರ್ಆರ್ಬಿಗಳಂತಹ ಹಣಕಾಸು ಸಂಸ್ಥೆಗಳ ಮೂಲಕ ಸಾಲಗಳನ್ನು ಹೊಂದಿಸಲಾಗುತ್ತದೆ. ಖಾಸಗಿ ಸಂಸ್ಥೆಗಳಿಂದ ಅತಿಹೆಚ್ಚು ಬಡ್ಡಿದರದಲ್ಲಿ ಸಾಲ ಪಡೆಯುವ ಮಹಿಳಾ ಉದ್ಯಮಿಗಳನ್ನು ಸಹಕರಿಸಲು ಈ ಯೋಜನೆ ಬಹಳ ಪ್ರಯೋಜನಕಾರಿಯಾಗಿದೆ.ರೂ. 3 ಲಕ್ಷ ಸಾಲ ಸೌಲಭ್ಯ ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಆರಂಭಿಸಲ್ಪಟ್ಟ ‘ಉದ್ಯೋಗಿನಿ’ ಯೋಜನೆಯಲ್ಲಿ ಸರ್ಕಾರ ಮಹತ್ತರ ಬದಲಾವಣೆ ತಂದಿದ್ದು, ರೂ. 3 ಲಕ್ಷ ಸಾಲ ಸೌಲಭ್ಯ ಒದಗಿಸಲಿದ್ದು, ರೂ. 90,000 ಸಬ್ಸಿಡಿ ನೀಡಲಾಗುವುದು.

  ಅರ್ಹತೆ ಮಾನದಂಡ: ಮಹಿಳೆಯರನ್ನು ಉದ್ಯಮಶೀಲರನ್ನಾಗಿ ರೂಪಿಸುವ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ವಾರ್ಷಿಕ ರೂ. 1.5 ಲಕ್ಷ ಆದಾಯ ಹೊಂದಿರುವ 55 ವರ್ಷದೊಳಗಿನ ಎಲ್ಲಾ ವರ್ಗದ ಮಹಿಳೆಯರಿಗೆ ಸಾಲ ಒದಗಿಸಲಾಗುತ್ತದೆ.

  ಯಾವ ಉದ್ಯಮಕ್ಕಾಗಿ ಸಾಲ: ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಉಪ್ಪಿನಕಾಯಿ, ಅಗರಬತ್ತಿ, ಕಾಫಿ -ಟೀ ಅಂಗಡಿ, ಟೈಲರಿಂಗ್, ಎಸ್‌ಟಿಡಿ ಬೂತ್‌, ಬ್ಯೂಟಿ ಪಾರ್ಲರ್‌, ಅಗರಬತ್ತಿ, ಕ್ಲಿನಿಕ್‌, ಜಿಮ…, ಸಿಹಿ ಅಂಗಡಿ, ಹಿಟ್ಟಿನ ಗಿರಣಿ, ಪೋಟೋ ಸ್ಟೂಡಿಯೋ, ಕಾಂಡಿಮೆಂಟ್ಸ್, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ 88ಕ್ಕೂ ಹೆಚ್ಚು ಪ್ರಮಾಣದ ಸಣ್ಣ ಉದ್ಯಮಗಳ ಆರಂಭಕ್ಕೆ ಸಾಲ ಸಿಗಲಿದೆ.

  ಸಾಲ ಪಡೆಯೋದು ಹೇಗೆ? ಎಲ್ಲಾ ಜಿಲ್ಲೆಗಳಲ್ಲಿರುವ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಯೋಜನೆ ಕಾರ್ಯಗತವಾಗಲಿದೆ. ತಾಲೂಕು, ಜಿಲ್ಲಾ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿಗಮದ ಮೂಲಕ ನಿರೀಕ್ಷಕರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.

  ವಯೋಮಿತಿ ಹಾಗು ಸಾಲ ಮಿತಿ ಏರಿಕೆ: ಈ ಹಿಂದೆ ಯೋಜನಾ ಫಲಾನುಭವಿಗಳ ವಯೋಮಿತಿಯನ್ನು 45ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಈಗ 55 ವರ್ಷಗಳಿಗೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಜತೆಗೆ ವಾರ್ಷಿಕ ಆದಾಯದ ಮಿತಿಯನ್ನು 40 ಸಾವಿರದಿಂದ ರೂ. 1.5 ಲಕ್ಷಗಳಿಗೆ ಏರಿಸಲಾಗಿದೆ. ಕಳೆದ 40 ವರ್ಷಗಳಿಂದ ಉದ್ಯೋಗಿನಿ ನಿಯಮಗಳು ಬದಲಾಗಿರಲಿಲ್ಲ.

  SHARE